ಬೆಳಗಾವಿ : ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮೋಹನ್ ತಳವಾರ್ (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಕೆಲಸದ ನಿಮಿತ್ಯ ನಿನ್ನೆ ಮೋಹನ್ ಅವರು ಕಿಣೆಯ ಗ್ರಾಂ ಪಂಚಾಯ್ತಿಗೆ ತೆರಳಿದ್ದರು. ಈ ವೇಳೆ ಕೆಲಸ ಮುಗಿಸಿಕೊಂಡು ಮರಳಿ ಬೈಕ್ನಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೋಹನ್ನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೋಹನ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.