ಮಂಡ್ಯ : ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು, ದೇವಸ್ಥಾನ ಒಂದರ ಮುಂಭಾಗದಲ್ಲೆ ವ್ಯಕ್ತಿ ಒಬ್ಬರ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಕೊಲೆಯಾದ ವ್ಯಕ್ತಿಯನ್ನು ಅದೇ ಗ್ರಾಮದ ಕೃಷ್ಣೆಗೌಡ (46) ಎಂದು ತಿಳಿದುಬಂದಿದೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಬೆಳ್ಳಂ ಬೆಳಗ್ಗೆ ಚಾಕುವಿನಿಂದ ಇರಿದು ಕೃಷ್ಣೆಗೌಡನ ಕತ್ತು ಸೀಳಿದ್ದು, ಗ್ರಾಮದ ಮದನಹಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲೆ ಈ ಒಂದು ಕೃತ್ಯ ನಡೆದಿದೆ.
ಆದರೆ ಹತ್ಯೆಗೆ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಹತ್ಯೆಗೈದ ಬಳಿಕ ಹಂತಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಕೆಎಂ ದೊಡ್ಡಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.