ಕೊಪ್ಪಳ : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ನಿನ್ನೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿ ಕೆಲಕಾಲ ವಾಹನ ಸವಾರರು ಪರದಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಘೋರ ಘಟನೆ ಒಂದು ನಡೆದಿದ್ದು ಮಳೆಯಿಂದಾಗಿ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕೋಷ್ಟಗಿ ತಾಲೂಕಿನ ನಂದಿಹಾಳ ಗ್ರಾಮದಲ್ಲಿ ನಡೆದಿದೆ.
ನಂದಿಹಾಳದಲ್ಲಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ನಂದಿಹಾಳ ಗ್ರಾಮದ ಶರಣಪ್ಪ ಭಾವಿಕಟ್ಟಿ (38) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಷ್ಟಗಿ ತಹಸೀಲ್ದಾರ್ ಮತ್ತು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.