ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೊಗಲಾ ಗ್ರಾಮದ ನಿವಾಸಿ ಚಂದ್ರಪ್ಪ ಮಲಕಪ್ಪ(45) ಎಂದು ಗುರುತಿಸಲಾಗಿದೆ.ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಎದರುಗಡೆ ಇಂದು ಮಧ್ಯಾಹ್ನ ನಡೆದಿದೆ.
ಚಂದ್ರಪ್ಪ, ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.