ವಿಜಯನಗರ : ಜಿಲ್ಲೆಯ ಹೊಸಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಈ ಒಂದು ರಸ್ತೆ ಅಪಘಾತದಲ್ಲಿ ಪತಿಸಾವನ್ನಪ್ಪಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿದೆ.
ಹೊಸಪೇಟೆಯ ಬಳಿ ಪತಿ ಪತ್ನಿ ಹಾಗೂ ಮಕ್ಕಳು ಬೈಕ್ ನಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದರು, ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕಿಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸಾವನಪ್ಪಿದ್ದು ಪತ್ನಿ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ.
ಕೂಡಲೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಭೀಕರತೆಗೆ ಕಾರು ಬೈಕ್ ಸಂಪೂರ್ಣವಾಗಿ ನುಗ್ಗುಜ್ಜಾಗಿದೆ.ಕೂಡಲೇ ಅಲ್ಲಿದ್ದ ಸ್ಥಳೀಯರು ನೆರವಿಗೆ ಬಂದು, ಪತ್ನಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದು ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.