ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ದೇವಸ್ಥಾನಕ್ಕೆ ಭೇಟಿ ನೀಡಿದಾಗಲೇ ಸಿಡಿಲು ಬಡಿದು ಪತಿ ಸಾವನ್ನಪ್ಪಿದ್ದು, ಪತ್ನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ನಡೆದಿದೆ.
ದೇವಸ್ಥಾನಕ್ಕೆ ಸಿಡಿಲು ಬಡಿದು ಸಾಯಣ್ಣ ಎನ್ನುವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನಕ್ಕೆ ಸಿಡಿಲು ಪಡೆದು ಸಾಯಣ್ಣ ಇದೀಗ ಸಾವನಪ್ಪಿದ್ದಾರೆ. ಕುಟುಂಬ ಸಮೇತರಾಗಿ ಸಾಯಣ್ಣ ಎನ್ನುವವರು ದೇವಸ್ಥಾನಕ್ಕೆ ತೆರಳಿದ್ದರು. ಸಾಯಣ್ಣ ಪತಿಗೆ ಗಾಯಗಳಾಗಿದ್ದು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.