ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯುವಜನತೆ ತಡರಾತ್ರಿ ರಾಜ್ಯದ ಎಲ್ಲೆಡೆ 2025 ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿತು. ಆದರೆ ಇದೇ ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿ ಒಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದ ಗಣೇಶ ಮಂದಿರದ ಬಳಿ ನಡೆದಿದೆ.
ಹೌದು ನ್ಯೂ ಇಯರ್ ಪಾರ್ಟಿ ಬಳಿಕ ವ್ಯಕ್ತಿಗೆ ದುಷ್ಕರ್ಮಿಗಳು ಚಾಕು ಇರಿದು ಗಾಯಗೋಳಿಸಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ತಡರಾತ್ರಿ 2.30 ಗಂಟೆಗೆ ಈ ಒಂದು ಘಟನೆ ನಡೆದಿದೆ. ಕುಶಾಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ನ್ಯೂ ಇಯರ್ ಪಾರ್ಟಿ ಬಳಿಕ ಕುಡಿದ ಅಮಲಿನಲ್ಲಿ ಗಲಾಟೆ ಆಗಿದೆ. ಗಾಯಾಳು ಕುಶಾಲನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಪಿ ಅಗ್ರಹಾರದ ಗಣೇಶ ದೇವಾಲಯದ ಬಳಿ ಈ ಒಂದು ಘಟನೆ ನಡೆದಿದೆ.ಕೆ ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.