ಬೆಂಗಳೂರು : ನಗರದಲ್ಲಿ ಹಾಡ ಹಗಲೇ ಪತ್ನಿಯ ಶೀಲ ಶಂಕಿಸಿದಂತ ಪತಿಯೊಬ್ಬ ಚಾಕುವಿನಿಂದ 7 ರಿಂದ 8 ಬಾರಿ ಚುಚ್ಚಿ ಬರ್ಬರವಾಗಿ ಇರಿದು ಕೊಲೆ ಮಾಡಿರುವಂತ ಘಟನೆ ಆನೇಕಲ್ ನಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಮೋಹನ್ ರಾಜು ಎಂಬಾತ ತನ್ನ ಪತ್ನಿಯ ಶೀಲ ಶಂಕಿಸಿ, ಹಾಡ ಹಗಲೇ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಹತ್ಯೆ ಗೈದಿದ್ದಾನೆ.
ಶ್ರೀಗಂಗಾ ಎಂಬಾಕೆಯೇ ಕೊಲೆಯಾದ ಮಹಿಳೆಯಾಗಿದ್ದಾರೆ. ಶ್ರೀಗಂಗಾ ಅವರು ಪತಿ ಮೋಹನ್ ರಾಜು ಅವರ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದನ್ನು ಬಿಡುವಂತೆ ಪತ್ನಿಗೆ ತಿಳಿಸಿದ್ದರೂ ಚಾಳಿ ಮುಂದುವರೆಸಿದ್ದರಂತೆ. ಈ ಕಾರಣದಿಂದ ಚಾಕುವಿನಿಂದ ಇರಿದು ಹತ್ಯೆ ಗೈದಿದ್ದಾನೆ ಎನ್ನಲಾಗಿದೆ.