ತುಮಕೂರು : ತುಮಕೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ಪತಿ ಪತಿ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ತನ್ನ ಪತ್ನಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು ಸುಮಾರು 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಎಂಬಲ್ಲಿ ನಡೆದಿದೆ. ಗೀತಾ (20) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.
ಚಾಕುವಿನಿಂದ ಇರಿದು ಪತಿ ನವೀನ್ ಕೊಲೆ ಮಾಡಿದ್ದಾನೆ. 20ಕ್ಕೂ ಹೆಚ್ಚು ಬಾರಿ ಇರಿದು ಗೀತಾಳನ್ನು ನವೀನ್ ಕೊಂದಿದ್ದಾನೆ. ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಎರಡು ವರ್ಷದ ಹಿಂದೆ ಎಷ್ಟೇ ಗೀತಾ ನವೀನ್ ನನ್ನು ಮದುವೆಯಾಗಿದ್ದಳು. ಅಂತರಸನಹಳ್ಳಿಯಲ್ಲಿ ದಂಪತಿಗಳು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ದಂಪತಿಯ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಇಂದು ಮನೆಯ ಮಾಲೀಕ ಬಾಡಿಗೆ ಪಡೆಯಲೆಂದು ಮನೆಯ ಬಳಿ ಬಂದಿದ್ದ. ಈ ವೇಳೆ ರಕ್ತದ ಮಾಡಿವಿನಲ್ಲಿ ನವೀನ್ ಪತ್ನಿ ಗೀತಾ ಬಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ತಕ್ಷಣ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ನವೀನ್ ಪತ್ನಿ ಗೀತಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕುತ್ತಿಗೆ ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ನವೀನ್ ಇರಿದಿದ್ದಾನೆ. ಸದ್ಯ ಪೊಲೀಸರು ಆರೋಪಿ ನವೀನ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.