ಆಂಧ್ರಪ್ರದೇಶ : ಇಂದು ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಜೋಡಿಹಕ್ಕಿಗಳು ಅತ್ಯಂತ ಸಂತಸದಿಂದ ಕಳೆಯುವ ಕ್ಷಣವಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಘೋರವದ ದುರಂತ ನಡೆದಿದ್ದು, ಯುವತಿಗೆ ಬೇರೆಯವರೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಭಗ್ನ ಪ್ರೇಮಿಯೊಬ್ಬ ಯುವತಿಯ ಮುಖಕ್ಕೆ ಆಸಿಡ್ ಎರಚಿ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಹೌದು ಪ್ರೇಮಿಗಳ ದಿನವೇ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಯುವತಿಯ ಮೇಲೆ ಆರೋಪಿ ಗಣೇಶ ಎನ್ನುವ ಯುವಕ ಆಸಿಡ್ ದಾಳಿ ಮಾಡಿದ್ದಾನೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಯುವಕ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಗಣೇಶ್ ಹಾಗೂ ಯುವತಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಆದರೆ ಇತ್ತೀಚಿಗೆ ಯುವತಿಗೆ ಬೆರೆಯವರೊಂದಿಗೆ ಮದುವೆ ಫಿಕ್ಸ್ ಆಗಿತ್ತು ಏಪ್ರಿಲ್ 29 ರಂದು ಯುವತಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು ಆದರೆ ಆರೋಪಿ ಗಣೇಶ್ ಯುವತಿಯ ಮುಖಕ್ಕೆ ಆಸಿಡ್ ಎರಚಿ ಹಲ್ಲೆ ಮಾಡಿದ್ದಾನೆ. ಸದ್ಯ ಯುವತಿಗೆ ಖಸಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.