ಮಂಡ್ಯ : ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬಿರಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಇದೀಗ ಮಂಡ್ಯ ಹಾಗೂ ಚಾಮರಾಜನಗರದಲ್ಲೂ ಕೂಡ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹೌದು ಮಂಡ್ಯ ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಕೂಡ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗರಾಜ್ ಕಡ ಆದೇಶ ಹೊರಡಿಸಿದ್ದಾರೆ. ಫೆಂಗಲ್ ಪರಿಣಾಮದಿಂದ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಫಂಗಲ್ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಉಳಿದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಇಂದು ಒಂದು ದಿನ ಮಾತ್ರ ಈ ಮೂರು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.