ಬೆಂಗಳೂರು: ಭಾರತ ಚುನಾವಣಾ ಆಯೋಗ (Election Commission of India) ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ (Voter’s Day) ಅಂಗವಾಗಿ ನೀಡುವ ರಾಜ್ಯ ಪ್ರಶಸ್ತಿ ಗೆ ಮಂಡ್ಯ ಜಿಲ್ಲಾಧಿಕಾರಿ ಭಾಜನರಾಗಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರು ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗದ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.