ಮಂಡ್ಯ : ಮಂಡ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ದುಷ್ಕರ್ಮಿಗಳು ತೋಟದ ಮನೆಗೆ ನುಗ್ಗಿ ವೃದ್ಧ ದಂಪತಿ ಮೇಲೆ ಹಲ್ಲೆಗೈದು, ಬಳಿಕ ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.
ದಂಪತಿ ಮೇಲೆ ಹಲ್ಲೆಗೈದು ಮನೆಯಲ್ಲಿದ್ದ ಸುಮಾರು 80 ಗ್ರಾಂ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲಿಗೊಳಗಾದ ರಾಮೇಗೌಡ ಮತ್ತು ನಿಂಗಮ್ಮಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಯಲ್ಲಿ ವಿರುದ್ಧ ದಂಪತಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.