ಮಂಡ್ಯ : ಪಾಲಹಳ್ಳಿ ರೌಡಿಶೀಟರ್ ಸುಪ್ರೀತ್ ಅಲಿಯಾಸ್ ಸುಪ್ರೀ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪ್ರಮೋದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೊಲೆ ಆರೋಪಿಯನ್ನು ಬಂಧಿಸುವ ವೇಳೆ ಪಿಸಿ ಶರತ್ ಮೇಲೆ ಆರೋಪಿ ಪ್ರಮೋದ್ ಹಲ್ಲೆಗೆ ಯತ್ನಿಸಿದ್ದಾನೆ.
ಈ ವೇಳೆ ಆರೋಪಿ ಪ್ರಮೋದ್ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕೆ ಆರ್ ಎಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುನೀತ್ ಫೈರಿಂಗ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಕಟ್ಟೆ ಬಳಿ ಈ ಒಂದು ಘಟನೆ ನಡೆದಿದೆ. ಸದ್ಯ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಪ್ರಮೋದ್ ಚಿಕಿತ್ಸೆ ಪಡೆಯುತ್ತಿದ್ದಾನೆ.