ಮಂಗಳೂರು : ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳ ಎಲ್ಲವನ್ನು ದ್ವಂಸಗೊಳಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಬರ್ಕೆ ಠಾಣೆ ಪೋಲೀಸರು 14 ರಾಮಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು, FIR ಕೂಡ ದಾಖಲಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ರಾಮಸೇನೆ ಮುಖ್ಯ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದಂತಹ ಸಚಿನ್, ಹರ್ಷರಾಜ್, ಮೋಹನ್ ದಾಸ್, ಪುರಂದರ, ರವೀಶ್, ಸುಕೇಶ, ಅಂಕಿತ್, ಕಾಳಿಮುತ್ತು, ಅಭಿಲಾಶ್, ದೀಪಕ್, ವಿಜ್ಞೇಶ್, ಶರಣ್ ರಾಜ್ ಹಾಗೂ ಪ್ರದೀಪ್ ಪೂಜಾರಿ ಎಂದು ತಿಳಿದುಬಂದಿದೆ. BNS ಕಾಯ್ದೆ 329(2), 324(5), 74, 351(3), 115 (2) 109, 352, 190ರ ಅಡಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಿಜೈ ಬಳಿ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ಏಕಾಏಕಿ ದಾಳಿ ಮಾಡಿದರು ಈ ವೇಳೆ ಪಾರ್ಲರ್ ನಲ್ಲಿದ್ದ ಹಲವು ಮಹಿಳೆಯರ ಮೇಲು ರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಪಾರ್ಲರಲ್ಲಿದ್ದ ಗಾಜುಗಳನ್ನು ಪುಡಿ ಪುಡಿ ಮಾಡಿ ಪೀಠೋಪಕರಣಗಳನ್ನು ಎತ್ತಿ ಬಿಸಾಡಿ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ಅನೈತಿಕ ಪೊಲೀಸ್ ಗಿರಿ ನಡೆಸಿದ ರಾಮ ಸೇನೆಯ ಒಟ್ಟು 14 ಜನ ಕಾರ್ಯಕರ್ತರನ್ನು ಮಂಗಳ ಬರಕ್ಕೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಇದೀಗ ಎಫ್ಐಆರ್ ಕೂಡ ದಾಖಲಾಗಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.