ಉತ್ತರಕನ್ನಡ : ಜಿಲ್ಲೆಯ ಮುಂಡಗೋಡು ವಸತಿ ಶಾಲೆಯ ಮಕ್ಕಳಲ್ಲಿ ಮಂಗನಬಾವು ಪತ್ತೆ ಹಿನ್ನೆಲೆಯಲ್ಲಿ ಮುಂಡಗೋಡು ಇಂದಿರಾ ವಸತಿ ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಈ ಕುರಿತು ಮಾಹಿತಿ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ವಸತಿ ಶಾಲೆಯ ಕೆಲವು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದೆ. ವಸತಿ ಶಾಲೆಗೆ ಒಂದು ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ. ಮನೆಗೆ ಹೋಗಲು ಬಯಸುವವರೆಗೆ ಮನೆಗೆ ಕಳುಹಿಸುತ್ತೇವೆ ಎಂದು ಅವರು ತಿಳಿಸಿದರು.
ಅಲ್ಲದೇ ಮನೆಗೆ ಹೋದಾಗ ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಸೂಚನೆ ನೀಡಿದ್ದೇವೆ. ಮನೆಗೆ ಹೋದವರನ್ನು ಐಸೋಲೇಶನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಐಸೋಲೇಶನ್ ನಲ್ಲಿರುವವರ ಬಗ್ಗೆ ನಿಗಾ ವಹಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಮಾಹಿತಿ ನೀಡಿದರು.