ಶಿವಮೊಗ್ಗ : ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಉಗ್ರರ ಗುಂಡೇಟಿಗೆ ಬಲಿಯಾದ ಸಂಗತಿ ಅತ್ಯಂತ ದುಃಖಕರ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ಮೃತ ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ ಹಾಗೂ ಸಂಬಂಧಿಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದೆ. ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ…
ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ಈಗಾಗಲೇ ದೂರವಾಣಿ ಮೂಲಕ ಮಾತನಾಡಿ, ಅಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ನೆರವಿನ ಭರವಸೆ ನೀಡಿ ಧೈರ್ಯ ಹೇಳಿದೆ…
ಇಂತಹ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರ ದಾಳಿಗೆ ಪ್ರಾಣ ಕಳೆದುಕೊಂಡ ಮಂಜುನಾಥ್ ಅವರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.








