ದಕ್ಷಿಣಕನ್ನಡ : ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಇದ್ದ ವಿವಾಹಿತೆಯೋಬ್ಬರು ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ಫಾರ್ಚೂನರ್ ಕಾರು ಕಳ್ಳತನ
ಈ ಒಂದು ಅಪಘಾತ ನಡೆದ ನಂತರ ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ, ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಯತೀಶ್ ದೇವಾಡಿಗ ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾಸ್ಕೋ ಭಯೋತ್ಪಾದಕ ಉಗ್ರನಿಗೆ 80ವಿ ಬ್ಯಾಟರಿಗೆ ಕಟ್ಟಿದ ಖಾಸಗಿ ವ್ಯಕ್ತಿಗಳಿಂದ ಕ್ರೂರವಾಗಿ ಹಿಂಸೆ
ಇಬ್ಬರು ಮುಡಿಪುವಿನಲ್ಲಿ ಭಾನುವಾರ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ಗೆ ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.