ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಟೊಯೋಟಾ ಸೇರಿದಂತೆ ವಿವಿಧ ಕಂಪನಿಗಳ ಬಿಡಿ ಭಾಗಗಳನ್ನು ಇಲ್ಲಿ ತಯಾರಿಸಲಾಗುತ್ತಿತ್ತು.
3d ಡೆಕೋರೇಷನ್, ಹೈಡ್ರೋಗ್ರಾಫಿಕ್ ಪೇಂಟಿಂಗ್ ಸಹ ಕಂಪನಿಯಲ್ಲಿ ಮಾಡಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ವಾಹನಗಳಿಂದ ಸದ್ಯ ಬೆಂಕಿ ನಂದಿಸುವ ಕಾರ್ಯಚರಣೆ ನಡೆಯುತ್ತಿದ್ದು, ಘಟನೆ ಕುರಿತಂತೆ ಬೊಮ್ಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.