ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತವೊಂದು ಸಂಭವಿಸಿದ್ದು, ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಬಿದ್ದು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಗಳೂರಿನ ಸರ್ಕಾರದ ಅಧೀನದಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶೇ. 70 ರಷ್ಟು ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.