ಕೋಲಾರ : ಆಕಸ್ಮಿಕ ಬೆಂಕಿಯಿಂದ ಪೈಂಟ್ ಕಾರ್ಖಾನೆ ಒಂದು ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಘಟನೆಯಲ್ಲಿ ಕೂಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಕರಗಲಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕೋಟ್ಯಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಗಾಹುತಿಯಾಗಿದೆ.
ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ದಟ್ಟವಾದ ಹೊಗೆ ಏರಿಯಾ ತುಂಬಾ ಅವರಿಸಿಕೊಂಡಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಲಾರ ಮತ್ತು ಮಾಲೂರಿ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.