ಹೈದ್ರಾಬಾದ್ : ಹೈದರಾಬಾದ್ ನ ಜಿಡಿಮೆಟ್ಲ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜೆಡಿಮೆಟ್ಲು ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಬ್ಯಾಗ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಸುತ್ತಮುತ್ತಲಿನ ನಿವಾಸಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಅಗ್ನಿ ಅವಘಡದಿಂದ ಕೋಟ್ಯಾಂತರ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕದಳ ದೌಡಾಯಿಸಿದ್ದು, ಸಿಬ್ಬಂದಿಯಿಂದ ಈಗ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಸುಮಾರು 10 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
ವಿದ್ಯುತ್ ತಂತಿಗಳ ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ. ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಈ ಒಂದು ಘಟನೆಗೆ ಕಾರಣ ಎನ್ನಲಾಗಿದೆ. ಮಾಹಿತಿ ನೀಡಿದರು ಕೂಡ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ವಿರುದ್ಧ ಜಿಡಿಮೆಟ್ಲ ಪ್ರದೇಶದ ನಿವಾಸಿಗಳು ಆರೋಪಿಸುತ್ತಿದ್ದಾರೆ.