ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಸ್ಪಂದನಾ ಆಸ್ಪತ್ರೆಯಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ವಾದಂತಹ ಅಗ್ನಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಈ ಒಂದು ಅನಾಹುತದಿಂದ ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹೌದು ಚಿಕ್ಕಮಗಳೂರಿನ ಸೇಂಟ್ ಜೋಸೆಫ್ ಶಾಲಾ ಮುಂಭಾಗದಲ್ಲಿರುವ ಸ್ಪಂದನಾಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದೆ. ಸದ್ಯ 10ಕ್ಕೂ ಹೆಚ್ಚು ರೋಗಿಗಳು ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಟ್ಟಡದ ಕೆಳಮಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.