ಚಿಕ್ಕಮಗಳೂರು : ಮುತ್ತಿನ ಕೊಪ್ಪದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.ಚಿಕ್ಕಮಂಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕು ಮುತ್ತಿನ ಕೊಪ್ಪ ನೀಲಗಿರಿ ಪ್ಲಾಂಟೇಶನ್ ನಲ್ಲಿ ಈ ಒಂದು ಭೀಕರವಾದ ಅಗ್ನಿ ದುರಂತ ಸಂಭವಿಸಿದೆ
ಹೌದು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ನೀಲಿಗಿರಿ ಪ್ಲಾನೆಟ್ ನಲ್ಲಿರುವ ಸುಮಾರು 5 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ನೀಲಗಿರಿ ಪ್ಲಾಂಟೇಶನ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದೀಗ ವ್ಯಕ್ತವಾಗಿದೆ.