ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಗಳು ವಾಸವಾಗಿದ್ದ ಶೆಡ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಹುಬ್ಬಳ್ಳಿಯ ವೀರಮಾರುತಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ವಾಸವಾಗಿದ್ದ ಶೆಡ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಯ್ಯಪ್ಪ ಮಾಲಾಧಾರಿಗಳು ಪೂಜೆ ಮಾಡಿ, ದೀಪ ಹಚ್ಚಿ ಹೊರಗೆ ಹೋಗಿದ್ದರು. ದೀಪದ ಕಿಡಿಯಿಂದಾಗಿ ಶೆಡ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಶೆಡ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.








