ಹೈದರಾಬಾದ್ : ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್‌ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.
Hyderabad, Telangana | A fire broke out in a building at Gulzar House near Charminar today at 6 am. 11 fire vehicles reached the spot. The cause of the fire is yet to be known: Fire official, Hyderabad.
— ANI (@ANI) May 18, 2025