ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಸಿಬಿ ಮಾದಕವಸ್ತು ನಿಗ್ರಹದಳ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಿದ್ದು, ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದೆ.