ಬೆಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್ ನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡ್ರಗ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 40 ಲಕ್ಷ ರೂ. 255 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ವಶಕ್ಕೆ ಪಡೆಯಲಾಗಿದೆ.
ಸಿ.ಸಿ.ಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿರವರುಗಳಿಗೆ, ದಿನಾಂಕ:14/08/2025 ರಂದು ಬಾತ್ಮೀಧಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಅವಲಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಮರಿಯಪ್ಪ ಲೇಔಟ್, ಮನೆಯೊಂದರಲ್ಲಿ ವಾಸವಾಗಿರುವ ವಿದೇಶಿ ಮೂಲದ ವ್ಯಕ್ತಿಯೋರ್ವನು ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್‌ನ್ನು ಆತನ ವಶದಲ್ಲಿಟ್ಟುಕೊಂಡು, ಆತನಗೆ ಪರಿಚಯವಿರುವ ಗಿರಾಕಿಗಳಿಗೆ ಮಾರಾಟ ಮಾಡಿ, ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಾನೆಂದು ತಿಳಿಸಿರುತ್ತಾರೆ.
ಈ ಮಾಹಿತಿಯನ್ನಾದರಿಸಿ, ಅದೇ ದಿನ ಸಂಜೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಜಂಟಿಯಾಗಿ, ಬಾತ್ಮೀಧಾರರು ತಿಳಿಸಿದ ಸ್ಥಳಕ್ಕೆ ಭೇಟಿ ನೀಡಿ, ದಾಳಿ ಮಾಡಿ, ಓರ್ವ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವಿದೇಶಿ ಪ್ರಜೆಯನ್ನು ವಿಚಾರಣೆಗೊಳಪಡಿಸಿಲಾಗಿ, ಆತನು 2024ನೇ ಸಾಲಿನ ಅಕ್ಟೋಬರ್ ಮಾಹೆಯಲ್ಲಿ ಟೂರಿಸ್ಟ್ ವೀಸಾದಡಿಯಲ್ಲಿ ದೆಹಲಿಗೆ ಬಂದು ಬಟ್ಟೆ ವ್ಯಾಪಾರ ಮಾಡಿಕೊಂಡಿರುತ್ತಾನೆ. 2025ನೇ ಸಾಲಿನಲ್ಲಿ ಬೆಂಗಳೂರಿಗೆ ಬಂದು, ಅವಲಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ವಾಸವಾಗಿರುತ್ತಾನೆ. ಬಟ್ಟೆ ವ್ಯಾಪಾರದಲ್ಲಿ ಬರುತ್ತಿದ್ದ ಹಣವು ಆತನಿಗೆ ಸಾಲದೇ ಇದ್ದುದರಿಂದ, ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್‌ನ್ನು ಮಾರಾಟ ಮಾಡಿಕೊಂಡು ಹೆಚ್ಚಿನ ಹಣ ಸಂಪಾದನೆ ಮಾಡುತ್ತಿರುವುದಲ್ಲದೇ, ಭಾರತ ಸರ್ಕಾರ ನೀಡಿರುವ ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತಿಳಿದು ಬಂದಿರುತ್ತದೆ.
ಆತನ ವಶದಲ್ಲಿದ್ದ 255 ಗ್ರಾಂ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ ಹಾಗೂ 01 ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ ₹ 40,00,000/- (ನಲವತ್ತು ಲಕ್ಷ ರೂಪಾಯಿ).
ದಿನಾಂಕ:15/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆತನಿಗೆ ಪರಿಚರಯವಿರುವ ವಿದೇಶದಲ್ಲಿರುವ ವ್ಯಕ್ತಿಯೋರ್ವನಿಂದ, ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್‌ನ್ನು ಕಡಿಮೆ ಬೆಲೆಗೆ ಖರೀದಿಸುತ್ತಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:16/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಮಾನ್ಯ ಜಂಟಿ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ಹಾಗೂ ಉಪ ಪೊಲೀಸ್ ಆಯುಕ್ತರು, ಅಪರಾಧ-2 ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ. ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.