ಬೆಂಗಳೂರು : ಬೆಂಗಳೂರು ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತು ಮಾರಾಟ ಮಾಡುತ್ತಿದ್ದ 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಸಿಸಿಬಿ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ 2.8 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
1 ಕೆಜಿ ಹೈಡ್ರೋಗಾಂಜಾ, 76 ಕೆಜಿ ಗಾಂಜಾ ಮತ್ತು 1 ಕೆಜಿ ಚರಸ್, 121 ಗ್ರಾಂ MDMA ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳು ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕುಮಾರಸ್ವಾಮಿ ಲೇಔಟ್, ಹೆಬ್ಬಾಳ, ಬಸವನಗುಡಿ, ಚಾಮರಾಜಪೇಟೆ ಜೆಸಿ ನಗರ,ಗೋವಿಂದರಾಜ ನಗರ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.







