ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಒಟ್ಟು 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಇಬ್ಬರು ವಿದೇಶಿ ಮಹಿಳೆಯರು ಸೇರಿ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳಿಂದ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್ 21 ಕೆಜಿ ಗಾಂಜಾ, 19 ಗ್ರಾಂ ಎಕ್ಸ್ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕ, ಡಿಜೆ ಹಳ್ಳಿ, ಬಾಣಸವಾಡಿ, ಕೋರಮಂಗಲ ಠಾಣೆ, ಬೊಮ್ಮನಹಳ್ಳಿ, ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.








