ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಉತ್ಪನ್ನ ತಯಾರಿಕಾ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬ್ರ್ಯಾಂಡೆಡ್ ಅಂತ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಉತ್ಪನ್ನ ತಯಾರಿಕಾ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪೂಮಾ, ನೈಕಿ ಬ್ರ್ಯಾಂಡ್ ನ ನಕಲಿ ಉತ್ಪನ್ನಗಳನ್ನು ಸೀಜ್ ಮಾಡಿದ್ದಾರೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 30 ಲಕ್ಷಕ್ಕೂ ಅಧಿಕ ಮೌಲ್ಯದ ನಕಲಿ ಬ್ರ್ಯಾಂಡೆಡ್ ವಶಕ್ಎ ಪಡೆದುಕೊಂಡಿದ್ದಾರೆ.
ಇನ್ನು ನಕಲಿ ಬ್ರ್ಯಾಂಡೆಡ್ ಜೀನ್ಸ್ ಲೆವಿಸ್, ಪೊಲೋ, ರಾಲ್ಫ್ ಲಾರೆನ್ ಬ್ರಾಂಡ್ ಜೀನ್ಸ್ ಬಟ್ಟೆಗಳನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದರು.