ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಸ್ತಾಕ್ ನನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿತ್ತು.
ಇದೀಗ ಕೊನೆಗೂ ಮೌಲ್ವಿ ಮುಸ್ತಾಕ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್ ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.