ಚಿಕ್ಕಬಳ್ಳಾಪುರ : MBA ವಿದ್ಯಾರ್ಥಿ ಒಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಟಿಯು ಕ್ಯಾಂಪಸ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ವಿ.ಬಾಬು ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ವಿಟಿಯು ಕ್ಯಾಂಪಸ್ ನ ಹಾಸ್ಟೆಲ್ ರೂಮ್ನಲ್ಲಿ ಶವವಾಗಿ ಪತ್ತೆಯಾಗಿರುವ ಎಂಬಿಎ ವಿದ್ಯಾರ್ಥಿ ವಿ.ಬಾಬು, ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರದವನೆಂದು ತಿಳಿದುಬಂದಿದೆ. ವಿದ್ಯಾರ್ಥಿ ವಿ ಬಾಬು ಈ ಒಂದು ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.