ಬೆಂಗಳೂರು : ಹಾಸ್ಟೆಲ್ ರೂಮ್ನಲ್ಲಿ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ದುರಂತ ನಡೆದಿದೆ.
ಹೌದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಎಂಬಿಬಿಎಸ್ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ ಎಂದು ತಿಳಿದುಬಂದಿದೆ. ಈತ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಮೆಡಿಕಲ್ ಕಾಲೇಜು ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಲೋಕೇಂದ್ರನಾಥ್ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಲೋಕೇಂದ್ರನಾಥ ಹಾಜರಾಗಿದ್ದ ಎನ್ನಲಾಗಿದೆ. ಆದರೆ ಮಧ್ಯಾಹ್ನ ಹಾಸ್ಟೆಲ್ ರೂಮಿಗೆ ಬಂದು ಡೋರ್ ಲಾಕ್ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲೋಕೇಂದ್ರನಾಥ್ ಮೂಲತಃ ರಾಜಸ್ಥಾನದವನೆಂದು ಹೇಳಲಾಗುತ್ತಿದ್ದು, ಇದೀಗ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.