ಹಾಸನ : ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ಹಾಸನದಲ್ಲೂ ಕೂಡ ಸಾವಿನ ಸಂಖ್ಯೆ ಏರಿಕೆ ಕಂಡಿದ್ದು, ಇದೀಗ ಡೆಂಗ್ಯೂ ಜ್ವರದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಗೋಹಳ್ಳಿ ಗ್ರಾಮದ ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ.ವಿಪರ‍್ಯಾಸವೆಂರೇ ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಸಹ ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.