ಬೆಂಗಳೂರು : ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸು್ತಿದ್ದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿದೆ.
ಬೆಂಗಳೂರಿನ ಫ್ರೀಂಡಂ ಪಾರ್ಕ್ ನಲ್ಲಿ ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಇ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿದೆ. ಇಂದು ಇಡೀ ದಿನ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದಾರೆ.