ಕಲಬುರ್ಗಿ : ನಗರದಲ್ಲಿರುವ ಮಹಾದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜಿನ (MRMC) ವಿದ್ಯಾರ್ಥಿಗಳ ಸ್ಟೈಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ, ಇದೀಗ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೈದರಾಬಾದ್ ಕರ್ನಾಟಕ ಸೊಸೈಟಿಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ ಅವರ 5.8 ಕೋಟಿ ಆಸ್ತಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಕಲಬುರಗಿಯ ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನಲ್ಲಿ 2018 ರಿಂದ 2024 ರವರೆಗೆ ನಡೆದ 82 ಕೋಟಿ ರೂ. ವಿದ್ಯಾರ್ಥಿವೇತನ ಹಗರಣದಲ್ಲಿ, ಹೆಚ್‌ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಲಿಗುಂದಿಯವರ 5.87 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಬಲಿಗುಂದಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.
2018 ರಿಂದ 2024 ರ ವರೆಗಿನ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಶಿಷ್ಯ ವೇತನದಲ್ಲಿ ಅಂದಾಜು 82 ಕೋಟಿ ರೂ. ಹಗರಣ ನಡೆದಿತ್ತು. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಆ ಬೆನ್ನಲ್ಲೆ ಕಳೆದ ಮಾರ್ಚ್ನಲ್ಲಿ ಇ.ಡಿ ಅಧಿಕಾರಿಗಳಿಂದ ಭೀಮಾಶಂಕರ್ ಬಲಿಗುಂದಿ ಸೇರಿ ನಾಲ್ವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು. ಕಲಬುರಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.