ಬೆಂಗಳೂರು: ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಪುನರಾರಂಭ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟಿಸಿರು ಬಿಟ್ಟಿದ್ದಾರೆ. ಎಂಜಿ ರೋಡ್- ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಕರೆಂಟ್ ಸಮಸ್ಯೆಯಿಂದ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಬಿಎಂಆರ್ಸಿಎಲ್ ಪ್ರಕಟಣೆಯನ್ನು ಹೊರಡಿಸಿತ್ತು.
ಸಮಸ್ಯೆ ಬಂದ ಕೂಡಲೇ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಬೆಳಿಗ್ಗೆ 11.00 ಗಂಟೆಯಿಂದ ರೈಲು ಸೇವೆಗಳು ಎಂದಿನಂತೆ ಪುನರ್ ಆರಂಭಿಸಲಾಗಿದೆ ಅಂತ ತಿಳಿಸಿದೆ. ಈ ಮೂಲಕ ಎಂಜಿ ರೋಡ್ ಮತ್ತು ಚಲ್ಲಘಟ್ಟ ನಡುವೆ ಬೈಯಪ್ಪನಹಳ್ಳಿ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.