ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ಮಹಿಳೆಯ ಮುಂದೆ ಅಸಭ್ಯವಾದ ವರ್ತನೆ ತೋರಿರುವ ಘಟನೆ ನಡದಿದೆ.
ಘಟನೆ ಸಂಬಂಧ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮಹಿಳೆ, ನಮ್ಮ ಮೆಟ್ರೋದಲ್ಲಿ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತನೆ ತೋರಿದ್ದಾನೆ. ನನಗೆ ಇಲ್ಲಿ ಅಸುರಕ್ಷಿತ ಎನಿಸುತ್ತಿದೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೆಟ್ರೋ ಅಧಿಕಾರಿಗಳು ಹಾಗೂ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಜಾಲಹಳ್ಳಿ ಮೆಟ್ರೋ ಫ್ಲಾಟ್‌ಫಾರಂನಲ್ಲಿ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿಯಿಂದ ಈ ಕೃತ್ಯ ನಡೆದಿದೆ ಎಂದು ದೂರಲಾಗಿದೆ. ಎದುರಿನ ಫ್ಲಾಟ್‌ಫಾರಂನಲ್ಲಿದ್ದ ಮಹಿಳೆಯ ಮುಂದೆ ಖಾಸಗಿ ಅಂಗವನ್ನು ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ.
ಈ ವಿಚಾರವನ್ನು ಮಹಿಳೆ ಮೆಟ್ರೋ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ಆದರೆ ಅವರಿಂದ ಯಾವುದೇ ಕ್ರಮ ಬಂದಿಲ್ಲ ಈ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.