ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಆರ್.ಟಿ. ನಗರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಂಡಲ್ ಮಾಡುವ ಯುವಕ ಪೊಲೀಸರಿಗೆ ದೂರು ನೀಡಿದ್ದು, ದೂರು ಪಡೆದು ಪೊಲೀಸರು ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಸಚಿವ ಭೈರತಿ ಸುರೇಶ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿದ ಅಪರಿಚಿತರು ಕೆಟ್ಟದಾಗಿ ಕಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಬೈರತಿ ಸುರೇಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಚಿವಭೈರತಿ ಸುರೇಶ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.