ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಲಾಗಿತ್ತು.ಈ ಒಂದು ಸಮಾವೇಶದಲ್ಲಿ ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅನಾವರಣಗೊಳಿಸಿದರು. ಸಮಾವೇಶದ ಬಳಿಕ ತೆರಳುತ್ತಿದ್ದ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ಕಾರು ಅಪಘಾತವಾಗಿದೆ.
ಹೌದು ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಗಲಿಬಿಲಿಗೊಂಡ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಚಾಲಕ ಹಾಗೂ ಪೊಲೀಸರಿಗೆ ಕಾರಲ್ಲೇ ಕುಳಿತು ಸುರೇಶ್ ಈ ವೇಳೆ ತರಾಟೆಗೆ ತೆಗೆದುಕೊಂಡರು. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ಪ್ರವೇಶ ದ್ವಾರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಸಚಿವ ಭಾರತಿ ಸುರೇಶ್ ಅವರಿಗೆ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.