BREAKING : ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು, ICU ನಲ್ಲಿ ಮುಂದುವರೆದ ಚಿಕಿತ್ಸೆ!
ಬೆಂಗಳೂರು : ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವ ಡಿ ಸುಧಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಭಾರೀ ವ್ಯತ್ಯಯ ಆಗಿದ್ದು ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ . ಇಂದು ಏಕಾಏಕಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಯಿತು. ವೈದ್ಯರು ಅವರಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
Copy and paste this URL into your WordPress site to embed
Copy and paste this code into your site to embed