ಬೆಂಗಳೂರು : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಸಾವನ್ನಪ್ಪಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಬಾಲಕ ನಿರಂಜನ್ ಕುಟುಂಬಕ್ಕೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಹಾಗೂ ನಮ್ಮ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೃತ ಬಾಲಕ ನಿರಂಜನ್ ತಂದೆ ವಿಜಯ್, ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್ ಐ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.