ಬೆಂಗಳೂರು : ಸ್ಮಾರ್ಟ್ ಮೀಟರ್ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಧನ ಸಚಿವ ಕೆ ಜೆ ಚಾರ್ಜ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ನೀಡಿಕೆಯಲ್ಲಿ ಬಹುಕೋಟಿ ಅವ್ಯವಹಾರ ಆರೋಪ ಸಂಬಂಧ ವಿವರಣೆ ಕೋರಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಕೆಲ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ನೋಟಿಸ್‌ಗೆ ವಾರದಲ್ಲಿ ಉತ್ತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನೋಟಿಸ್ ಸ್ವೀಕರಿಸಿರುವ ಸಚಿವ ಜಾರ್ಜ್ ಅವರು, ಈ ಗುತ್ತಿಗೆ ಸಂಬಂಧ ತಾವು ಏಕಪಕ್ಷೀಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಡಿಸಿರುವುದಾಗಿ ತಿಳಿದು ಬಂದಿದೆ. ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ಅವ್ಯವಹಾರ ಆರೋಪ ಕುರಿತು ದಾಖಲೆಗಳನ್ನು ಸಂಗ್ರಹಿಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತ ಪೊಲೀಸರು, ಅಕ್ರಮದ ಬಗ್ಗೆ ವಿವರಣೆ ಕುರಿತು ಸಚಿವ ಜಾರ್ಜ್ ಹಾಗೂ ಬೆಸ್ಕಾಂ ವ್ಯವಸ್ಥಾಪಕ ಮಹಾಂತೇಶ್ ಬೀಳಗಿ ಸೇರಿದಂತೆ ಇಂಧನ ಇಲಾಖೆ ಕೆಲ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.








