ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಸಿಟಿ ರವಿ ಅವರು ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಬದುಕಿದ್ದೇ ಪುಣ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿ.ಟಿ. ರವಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ಕೊಳಕು ಬಾಯಿ ಇದೇನು ಹೊಸದಲ್ಲ, ಸಿಎಂ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ನಿಂದಿಸಿದ್ದಾರೆ. ಬೇರೆಯವರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸಿಟಿ ರವಿ ಬದುಕಿದ್ದೇ ಹೆಚ್ಚು. ಪುಣ್ಯ ನಮ್ಮ ಕಾರ್ಯಕರ್ತರು ಸಮಾಧಾನವಾಗಿ ನಡೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಭಾಪತಿಗಳ ನಡೆ ಸರಿ ಇಲ್ಲ. ಅಶ್ಲೀಲ ಪದ ಬಳಕೆಯಾದಾಗ ಆ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಬೇಕಿತ್ತು ಎಂದು ಹೇಳಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದಾರೆ.