ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.
ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ.