ಬೆಂಗಳೂರು : ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಜಾರಿ ಮಾಡಲಾಗಿದ್ದರು ಕೂಡ ಇತ್ತೀಚಿಗೆ ಬೆಳಗಾವಿಯ ಹಿಂಡಲಗಾದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಂಗನವಾಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದರಿಂದ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಇತ್ತೀಚಿಗೆ ಬೆಳಗಾವಿಯ ಹಿಂಡಲಗಾದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೆ ಸಭೆ ನಡೆಸಿದ್ದರಿಂದ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ ಏಪ್ರಿಲ್ 30 ರಂದು ಹಾಜರಾಗುವಂತೆ ಆದೇಶ ಹೊರಡಿಸಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೆ ಪ್ರೀತ್ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾ ಅಧಿಕಾರಿಗಳ ಅನುಮತಿಯನ್ನು ಪಡೆಯದೆ ಸಭೆ ನಡೆಸಿದ್ದರಿಂದ ಚುನಾವಣಾ ಅಧಿಕಾರಿ ಮಹಾಂತೇಶ್ ಖಾಸಗಿ ದೂರು ದಾಖಲಿಸಿದ್ದರು.
ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯ ರೊಂದಿಗೆ ಹೆಬ್ಬಾಳ್ಕರ್ ಸಭೆ ನಡೆಸಿದರು ಎಂದು ಹೇಳಲಾಗುತ್ತಿದೆ. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಸಭೆ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಕೋರ್ಟಿಗೆ ಹಾಜರಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ನೀಡಿದೆ.