ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ರವಿ ಪಟೀಲ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ನೀಡುತ್ತಿದ್ದಾರೆ.
ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹೆಬ್ಬಾಳ್ಕರ್ ತಾಯಿ ಹಾಗೂ ಸೋದರಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ.