ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.