ದಾವಣಗೆರೆ : ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಇದರ ಬೆನ್ನಲ್ಲೆ ಸಚಿವ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ ಆರೋಪಿಯನ್ನು ಸೋಲಾಪುರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯರಿಗೆ ಪ್ರಿಯಾಂಕ ಖರ್ಗೆ ಬೆಂಬಲಿಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ಹೌದು ಮಾಜಿ ಸಚಿವ ರೇಣುಕಾಚಾರ್ಯಗೆ ಕರೆ ಮಾಡಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಂಪಿ ರೇಣುಕಾಚಾರ್ಯ ಅವರು ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗ ನನಗೆ ಬೆದರಿಕೆ ಹಾಕಿದ್ದಾನೆ ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ನಿನ್ನೆ ಬೆಳಗಾವಿಯಿಂದ ನನಗೆ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ನನ್ನ ತಾಯಿಯ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡಿದರೆ ಹುಷಾರ್ ಎಂದಿದ್ದಾನೆ ಆದರೆ ಮೊಬೈಲ್ ನಂಬರ್ ನಾನು ಸೇವ್ ಮಾಡಿ ಇಟ್ಕೊಂಡಿದ್ದೇನೆ ಆದರೆ ಪೊಲೀಸ್ರಿಗೆ ನಾನು ದೂರು ಕೊಡಲ್ಲ ಎಂದು ದಾವಣಗೆರೆಯಲ್ಲಿ ಎಂಪಿ ರೇಣುಕಾಚಾರ್ಯ ಹೇಳಿಕೆ ನೀಡಿದರು.